
ಹವಾಮಾನ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಬೆಳಗ್ಗೆನೆ ತುಂತುರು ಮಳೆಯಾಗಿದೆ. ಈ ಹಿನ್ನಲೆ ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರೀ ಮಳೆ ಹಿನ್ನಲೆ, ಇಂದು ಕೊಡಗಿನ ಶಾಲೆ, ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆ ಜಿಲ್ಲಾಧಿಕಾರಿ ವೆಂಕಟರಾಜಾ ಇಂದು ಕೊಡಗಿನ ಶಾಲೆ, ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.