Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಮಲಯಾಳಂ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಸಲಿಂಗ ಸ್ಟಾರ್ ಜೋಡಿ.. ಯಾರಿವರು?

editor tv by editor tv
August 6, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಬಿಗ್​ಬಾಸ್​ ಸೀಸನ್ 7 ನಿರೂಪಣೆಯನ್ನು ಸೂಪರ್ ಸ್ಟಾರ್ ಮೋಹನ್ ಲಾಲ್ ವಹಿಸಿಕೊಂಡಿದ್ದಾರೆ. ಈ ಬಾರಿಯ ಸೀಸನ್ 7ಕ್ಕೆ ಆಧಿಲಾ ನಜ್ರನ್ ಮತ್ತು ಫಾತಿಮಾ ನೋರಾ ಎಂಟ್ರಿ ಕೊಟ್ಟು ಎಲ್ಲರಿಗೂ ಶಾಕ್​ ಕೊಟ್ಟಿದ್ದಾರೆ.

06 Aug 2025 08:

bb7 malayalam

ಕನ್ನಡ ಬಿಗ್​ಬಾಸ್​ ಸೀಸನ್ 12 ಶುರುವಾಗೋದಕ್ಕೆ ಕೆಲವು ದಿನಗಳು ಬಾಕಿ ಇವೆ. ಈ ಬಗ್ಗೆ ಬಿಗ್​ಬಾಸ್​ ಟೀಮ್​ ಅಧಿಕೃತ ಮಾಹಿತಿ ನೀಡಬೇಕಿದೆ. ಸದ್ಯದಲ್ಲೇ ಬಿಗ್​ಬಾಸ್​ ಪ್ರೋಮೋಗಳು ರಿಲೀಸ್​ ಆಗಲಿವೆ. ಹೀಗಾಗಿ ಬಿಗ್​ಬಾಸ್​ ಶೋ ಕಣ್ತುಂಬಿಕೊಳ್ಳೋದಕ್ಕೆ ವೀಕ್ಷಕರು ಕಾಯುತ್ತಿದ್ದಾರೆ.

https://www.instagram.com/reel/DM9-k3eCOBb/?igsh=MXQ3YWJya2YyZzFjeg==

ಈ ಮಧ್ಯೆ ಮಲಯಾಳಂನಲ್ಲಿ ಬಿಗ್​ಬಾಸ್​ ಸೀಸನ್ 7 ಶುರುವಾಗಿದೆ. ಈ ಮಲಯಾಳಂ ಬಿಗ್​ಬಾಸ್​ಗೆ ಸಲಿಂಗ ಜೋಡಿ ಎಂಟ್ರಿ ಕೊಟ್ಟಿದೆ. ಈ ಸ್ಟಾರ್​ ಸಲಿಂಗ ಜೋಡಿಯನ್ನು ಸೂಪರ್ ಸ್ಟಾರ್ ಮೋಹನ್ ಲಾಲ್ ವೇದಿಕೆಗೆ ಗ್ರ್ಯಾಂಡ್​ ಆಗಿ ಸ್ವಾಗತಿಸಿದ್ದಾರೆ.

bb7 malayalam(2)

ಮಲಯಾಳಂನಲ್ಲಿ ಬಿಗ್​ಬಾಸ್​ ಸೀಸನ್ 7 ನಿರೂಪಣೆಯನ್ನು ಸೂಪರ್ ಸ್ಟಾರ್ ಮೋಹನ್ ಲಾಲ್ ವಹಿಸಿಕೊಂಡಿದ್ದಾರೆ. ಈ ಬಾರಿಯ ಸೀಸನ್ 7ಕ್ಕೆ ಆಧಿಲಾ ನಜ್ರನ್ ಮತ್ತು ಫಾತಿಮಾ ನೋರಾ ಎಂಟ್ರಿ ಕೊಟ್ಟು ಎಲ್ಲರಿಗೂ ಶಾಕ್​ ಕೊಟ್ಟಿದ್ದಾರೆ.

bb7 malayalam(3)

ಯಾರು ಈ ಆಧಿಲಾ ನಜ್ರನ್ ಮತ್ತು ಫಾತಿಮಾ ನೋರಾ..?

ಸಲಿಂಗ ಜೋಡಿಯಾದ ಆಥಿಲಾ ನಜ್ರನ್ ಮತ್ತು ಫಾತಿಮಾ ನೋರಾ ಕೇರಳದವರು.  ಪೋಷಕರ ಒತ್ತಾಯದಿಂದ ಬೇರ್ಪಟ್ಟ ನಂತರ ಹೈಕೋರ್ಟ್ ಮೆಟ್ಟಿಲೇರಿ, ಕಳೆದ ಮೇ ತಿಂಗಳಲ್ಲಿ ಕೋರ್ಟ್ ತೀರ್ಪಿನಿಂದ ಮತ್ತೆ ಒಂದಾಗಿದ್ದರು. ಇದಾದ ಬಳಿಕ ಇತ್ತೀಚೆಗಷ್ಟೇ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದವು.

ಆಧಿಲಾ ನಜ್ರನ್ ಮತ್ತು ಫಾತಿಮಾ ನೋರಾ ಪ್ರೀತಿಗೆ ಎರಡು ಕುಟುಂಬಗಳ ವಿರೋಧವಿತ್ತು. ಸೌದಿ ಅರೇಬಿಯಾದಲ್ಲಿ 10ನೇ ತರಗತಿ ಓದುತ್ತಿದ್ದಾಗ ಆಧಿಲಾ, ನೋರಾಳನ್ನು ಭೇಟಿ ಮಾಡುತ್ತಾಳೆ. ಎಲ್ಲರಂತೆಯೇ ಇಬ್ಬರ ಸ್ನೇಹ ಆರಂಭವಾಗುತ್ತದೆ. ಆದರೆ, ದಿನ ಕಳೆದಂತೆ ಇಬ್ಬರ ಸ್ನೇಹ ಗಾಢವಾಗಿ ಮತ್ತೊಂದು ಹಂತಕ್ಕೆ ಹೋಗುತ್ತದೆ. ಆಗ ಇಬ್ಬರದ್ದು ಸಲಿಂಗಕಾಮ ಎಂದು ಅರಿವಾಗುತ್ತದೆ. ಅಂದಿನಿಂದ ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ತುಂಬಾ ಹತ್ತಿರವಾಗುತ್ತಾರೆ. ಇಬ್ಬರ ಪಾಲಕರು ಕೂಡ ಫ್ರೆಂಡ್ಸ್ ಆಗಿರುವುದರಿಂದ ಆಧಿಲಾ ಮತ್ತು ನೋರಾಳನ್ನು ಉನ್ನತ ಶಿಕ್ಷಣಕ್ಕಾಗಿ ಕೊಯಿಕ್ಕೋಡ್‌ನಲ್ಲಿರುವ ಕಾಲೇಜಿಗೆ ಕಳುಹಿಸಲು ನಿರ್ಧಾರ ಮಾಡುತ್ತಾರೆ. ಶಿಕ್ಷಣ ಮುಗಿದ ಬಳಿಕವೂ ಉಳಿದ ಜೀವನವನ್ನು ಒಟ್ಟಿಗೆ ಕಳೆಯಬೇಕೆಂದು ನಿರ್ಧಾರ ಮಾಡುವ ಅಧಿಲಾ ಮತ್ತು ನೋರಾ, ಡಿಗ್ರಿ ಪೂರ್ಣಗೊಳಿಸಿದ ಬಳಿಕ ಇಬ್ಬರ ವಿಚಾರವನ್ನು ಕುಟುಂಬದ ಮುಂದೆ ಪ್ರಸ್ತಾಪಿಸುತ್ತಾರೆ.

bb7 malayalam(1)

ಆದ್ರೆ ಅವರು ತಿಳಿಸುವ ಮುನ್ನವೇ ಎರಡು ಕುಟುಂಬಕ್ಕೆ ಇಬ್ಬರ ಸಂಬಂಧದ ಬಗ್ಗೆ ತಿಳಿಯುತ್ತದೆ. ಬಳಿಕ ಒಂದೇ ಕಾಲೇಜಿಗೆ ಇಬ್ಬರನ್ನು ಸೇರಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳುತ್ತಾರೆ. ಇಬ್ಬರನ್ನು ಬೇರೆ ಬೇರೆ ಕಾಲೇಜಿಗೆ ಕಳುಹಿಸುತ್ತಾರೆ. ಇಬ್ಬರ ಮೇಲೆ ಸಾಕಷ್ಟು ನಿರ್ಬಂಧಗಳನ್ನು ಹೇರುತ್ತಾರೆ. ಈ ಮೂಲಕವಾದರೂ ಈ ಇಬ್ಬರು ದೂರವಾಗುತ್ತಾರೆ ಅಂತ ಪೋಷಕರು ಭಾವಿಸುತ್ತಾರೆ. ಆದರೆ, ಇಬ್ಬರು ಸಾಮಾಜಿಕ ಜಾಲತಾಣದ ಮೂಲಕ ಮತ್ತೆ ಸಂಪರ್ಕ ಬೆಳೆಸುತ್ತಾರೆ. ಅಲ್ಲದೆ, ಮತ್ತೆ ಭೇಟಿಯಾಗಿ, ಸಲಿಂಗ ಪ್ರೇಮಿಗಳು ಮತ್ತು ಸಲಿಂಗಕಾಮದ ಬಗ್ಗೆ ಹೆಚ್ಚು ಅರಿತುಕೊಂಡು ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ. ಪೋಷಕರ ವಿರೋಧದ ನಡುವೆಯೂ ನ್ಯಾಯಾಲಯ ಮೆಟ್ಟಿಲೇರುತ್ತಾರೆ. ಆಗ ನಡೆದ ಎಲ್ಲ ಘಟನೆಯನ್ನು ಆಧಿಲಾ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದಳು. ಅಂತಿಮವಾಗಿ ಕೋರ್ಟ್ ಮೇ.31ರಂದು ಇಬ್ಬರು ಒಟ್ಟಿಗೆ ಬಾಳಬಹುದಾಗಿದೆ ಎಂದು ಆದೇಶ ನೀಡುತ್ತದೆ. ಈ ಮೂಲಕ ಅಧಿಲಾ ಮತ್ತು ನೋರಾ ಖುಷಿಯಿಂದ ಜೀವನ ನಡೆಸುತ್ತಿದ್ದಾರೆ. 

Previous Post

ಉತ್ತರಕಾಶಿ ಮೇಘಸ್ಫೋಟದ ಬೆಚ್ಚಿಬೀಳಿಸುವ ದೃಶ್ಯಗಳು, ಧರಾಲಿ ಗ್ರಾಮವೇ ನಿರ್ನಾಮ! :60ಕ್ಕೂ ಹೆಚ್ಚು ಬಲಿ ಶಂಕೆ

Next Post

24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

Next Post
24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.