ವಾಷಿಂಗ್ಟನ್: ಭಾರತ (India) ರಷ್ಯಾದಿಂದ (Russia) ಕಚ್ಚಾ ತೈಲ ಖರೀದಿ ಮುಂದುವರಿಸಿದ್ದಕ್ಕೆ ಪ್ರತಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತಕ್ಕೆ 50% ಸುಂಕ (Tariff) ವಿಧಿಸಿ ಶಾಕ್ ಕೊಟ್ಟಿದ್ದಾರೆ.
ಭಾರತಕ್ಕೆ ಹೆಚ್ಚುವರಿಯಾಗಿ 25% ಸುಂಕ ವಿಧಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಸಹಿ ಹಾಕಿದ್ದಾರೆ. ಆದೇಶದ ಪ್ರಕಾರ, ಭಾರತದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಸರಕುಗಳು ಹೆಚ್ಚುವರಿಯಾಗಿ 25% ಆಮದು ಸುಂಕವನ್ನು ಎದುರಿಸಬೇಕಾಗುತ್ತದೆ.
ಭಾರತವು ನಮ್ಮ ಉತ್ತಮ ವ್ಯಾಪಾರ ಪಾಲುದಾರನಲ್ಲ. ಏಕೆಂದರೆ ಭಾರತ ನಮ್ಮೊಂದಿಗೆ ಬಹಳಷ್ಟು ವ್ಯವಹಾರ ಮಾಡುತ್ತಾರೆ. ಆದ್ರೆ ನಾವು ಅವರೊಂದಿಗೆ ವ್ಯಾಪಾರ ಮಾಡಲ್ಲ. ಆದ್ದರಿಂದ ನಾವು 25 ಪ್ರತಿಶತದಷ್ಟು ಇತ್ಯರ್ಥಪಡಿಸಿಕೊಂಡಿದ್ದೇವೆ. ಆದ್ರೆ ನಾವು ಹೇಳಿದ ಮೇಲೂ ರಷ್ಯಾದಿಂದ ನಿರಂತರವಾಗಿ ತೈಲ ಖರೀದಿ ಮಾಡಲಾಗುತ್ತಿದೆ. ಈ ಮೂಲಕ ಭಾರತ ರಷ್ಯಾದ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ. ಹಾಗಾಗಿ ಮುಂದಿನ 24 ಗಂಟೆಗಳಲ್ಲಿ ಆಮದುಗಳ ಮೇಲೆ ಸುಂಕವನ್ನು ಗಣನೀಯವಾಗಿ ಏರಿಕೆ ಮಾಡುವುದಾಗಿ ಟ್ರಂಪ್ ಬೆದರಿಕೆಯೊಡ್ಡಿದ್ದರು. ಅದರಂತೆ ಭಾರತದ ಮೇಲೆ 50% ಸುಂಕ ವಿಧಿಸಿ ಟ್ರಂಪ್ ಆದೇಶ ಹೊರಡಿಸಿದ್ದಾರೆ.
ಒಂದು ದಿನದ ಹಿಂದಷ್ಟೇ ಸುಂಕ ಗಣನೀಯ ಏರಿಕೆ ಕುರಿತು ಟ್ರಂಪ್ ಮಾತನಾಡಿದ್ದರು. ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ. ರಷ್ಯಾದ ಯುದ್ಧ ಟ್ಯಾಂಕರ್‌ಗಳಿAದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು.
ಈ ಮೊದಲು ಆಗಸ್ಟ್ 1 ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ 25% ನಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದರು.