ಮಂಗಳೂರು, (ಸೆಪ್ಟೆಂಬರ್ 11): ಧರ್ಮಸ್ಥಳ ಪ್ರಕರಣಕ್ಕೆ (Dharmasthala mass burial case) ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಎಸ್‌ಐಟಿ ವಿಚಾರಣೆ ಬಳಿಕ ವಿಠಲ್ ಗೌಡ ಕೆಲ ಮಹತ್ವದ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಹೌದು.. ಪ್ರಕರಣ ಸಂಬಂಧ ವಿಠಲ ಗೌಡ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದೆ. ಅಲ್ಲದೇ ಕಲೆ ಜಾಗಗಳಿಗೆ ಕರೆದೊಯ್ದು ಸ್ಥಳ ಮಹಜರು ಮಾಡಿದ್ದು, ಇದೀಗ ಸ್ಥಳ ಮಹಜರು ವೇಳೆ ಮಾಹಿತಿಯನ್ನು ವಿಠಲ ಗೌಡ (vittal gowda) ಬಹಿರಂಗಪಡಿಸಿದ್ದಾರೆ. ಬಂಗ್ಲಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದು, ಆ ವೇಳೆ ಹೆಣಗಳ ರಾಶಿ ಸಿಕ್ಕಿದೆ ಎಂದು ವಿಠಲ ಗೌಡ ವಿಡಿಯೋನಲ್ಲಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ವಿಡಿಯೋ ಬಿಡುಗಡೆ ಮಾಡಿರುವ ವಿಠಲ ಗೌಡ, ಬಂಗ್ಲಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ಮೂರು ಮನುಷ್ಯರ ಕಳೆಬರಹಗಳು ಸಿಕ್ಕಿದೆ. ಹತ್ತಿರ ಹತ್ತಿರ ಹತ್ತು ಫೀಟ್ ಗಳಲ್ಲಿ. ಎರಡನೇ ಬಾರಿಗೆ ಸ್ಥಳ ಮಹಜರಿಗೆ ಹೋದಾಗ ಹೆಣಗಳ ರಾಶಿ ಸಿಕ್ಕಿದೆ. ಕಣ್ಣಿಗೆ ಕಂಡದ್ದು 5 ಹೆಣಗಳು. ಸಣ್ಣ ಮಗುವಿನ ಎಲುಬು ಇದೆ ಅಂತ ಗೋಚರ ಆಗುತ್ತಿತ್ತು ಎಂದು ಹೇಳಿಕೊಂಡಿದ್ದಾರೆ.
ವಾಮಾಚಾರಕ್ಕೆ ಬಳಸುವ ವಸ್ತುಗಳು ಕೂಡಾ ಸಿಕ್ಕಿದೆ. ಹೂತಿಟ್ಟ ಶವಗಳನ್ನು ಕಾಣದ ಹಾಗೇ ಮಾಡಲು ಮಣ್ಣು ತೆಗೆದು ಹಾಕಿದ ಹಾಗೇ ಕಾಣುತ್ತಿತ್ತು. ಐದಾರು ಫೀಟ್‌ನಲ್ಲಿ ಬುರುಡೆ ರಾಶಿ ಇದೆ. ಎಲುಬು ಅಲ್ಲಲ್ಲಿ ಸ್ಪ್ರೆಡ್ ಆಗಿದೆ. ಕಳೆಬರಹಗಳು ಅಲ್ಲಲ್ಲಿ ಇತ್ತು, ಬುರುಡೆಗಳು ಮಣ್ಣಲ್ಲಿ ಎದ್ದು ಕಾಣ್ತಿತ್ತು. ನೋಡಿದ ಬುರುಡೆಗಳು ಹಾಗೆ ಇದೆ. ಆದ್ರೆ, ಅದನ್ನು ಮುಟ್ಟಿಲ್ಲ. ತನಿಖೆಗೆ ಯಾವಾಗ ಕರೆದ್ರು ಬರ್ತೇನೆ ಎಂದು ಹೇಳಿದ್ದೇವೆ
ಚಿನ್ನಯ್ಯ, ತಾನಸಿ, ರಂಗ, ಸುಬ್ರಹ್ಮಣ್ಯ ಎಲ್ಲ ಹೇಳಿದ್ದಾರೆ. ಅವರ ಮಾಹಿತಿ ಪ್ರಕಾರ ಎಲ್ಲ ತೋರಿಸಲು ರೆಡಿ ಇದ್ದೇನೆ. ಅದೇ ಊರಲ್ಲಿ ಇದ್ದು ಒಂದೇ ಕಡೆ ರಾಶಿ ಹಾಕಿದ್ದು ನೋಡಿ ಅಚ್ಚರಿ ಆಗಿದೆ. ಚಿನ್ನಯ್ಯ ಹೇಳಿದ್ದು ನೂರಕ್ಕೆ ನೂರು ಸತ್ಯ. ಅದರಲ್ಲಿ ಯಾವುದೇ ಡೌಟ್ ಇಲ್ಲ ಎಂದು ಹೇಳಿದ್ದಾರೆ.