ಧರ್ಮಸ್ಥಳ: ಚಿನ್ನಯ್ಯ ಹೇಳಿದ್ದು ನೂರಕ್ಕೆ ನೂರು ಸತ್ಯ, ಧರ್ಮಸ್ಥಳದಲ್ಲಿ (Dharmasthala) ಹೆಣಗಳ ರಾಶಿಯೇ ಸಿಕ್ಕಿದೆ ಎಂದು ಸೌಜನ್ಯ ಮಾವ ವಿಠಲ ಗೌಡ (Vital Gowda) ಸ್ಫೋಟಕ ಹೇಳಿಕೆ ನೀಡಿದ್ದಾರೆ.
ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಅವರು, ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದರು. ಅಲ್ಲಿ ಮೂರು ಮನುಷ್ಯರ ಕಳೆಬರಹಗಳು ಸಿಕ್ಕಿವೆ. ಹತ್ತಿರ ಹತ್ತಿರ ಹತ್ತು ಫೀಟ್ಗಳಲ್ಲಿ ಎರಡನೇ ಬಾರಿಗೆ ಸ್ಥಳ ಮಹಜರಿಗೆ ಹೋದಾಗ ಹೆಣಗಳ ರಾಶಿ ಸಿಕ್ಕಿದೆ. ಕಣ್ಣಿಗೆ ಕಂಡದ್ದು 5 ಹೆಣಗಳು, ಸಣ್ಣ ಮಗುವಿನ ಎಲುಬು ಇದೆ ಎಂದು ಗೋಚರ ಆಗುತ್ತಿತ್ತು ಎಂದಿದ್ದಾರೆ.
ವಾಮಾಚಾರಕ್ಕೆ ಬಳಸುವ ವಸ್ತುಗಳು ಕೂಡಾ ಸಿಕ್ಕಿವೆ. ಹೂತಿಟ್ಟ ಶವಗಳನ್ನು ಕಾಣದ ಹಾಗೇ ಮಾಡಲು ಮಣ್ಣು ತೆಗೆದು ಹಾಕಿದ ಹಾಗೇ ಕಾಣುತ್ತಿತ್ತು. ಐದಾರು ಫೀಟ್ನಲ್ಲಿ ಬುರುಡೆ ರಾಶಿ ಇದೆ, ಎಲುಬು ಅಲ್ಲಲ್ಲಿ ಹರಡಿಕೊಂಡಿವೆ. ಬುರುಡೆಗಳು ಮಣ್ಣಲ್ಲಿ ಎದ್ದು ಕಾಣುತ್ತಿದ್ದವು. ನೋಡಿದ ಬುರುಡೆಗಳು ಹಾಗೆ ಇದೆ ಅದನ್ನು ಮುಟ್ಟಿಲ್ಲ ಎಂದಿದ್ದಾರೆ.
ತನಿಖೆಗೆ ಯಾವಾಗ ಕರೆದರೂ ಬರ್ತೇನೆ ಅಂತ ಹೇಳಿದ್ದೇನೆ. ಚಿನ್ನಯ್ಯ, ತಾನಾಸಿ, ರಂಗ, ಸುಬ್ರಹ್ಮಣ್ಯ ಎಲ್ಲ ಹೇಳಿದ್ದಾರೆ. ಅವರ ಮಾಹಿತಿ ಪ್ರಕಾರ ಜಾಗ ತೋರಿಸಲು ತಯಾರಾಗಿದ್ದೇನೆ. ಅದೇ ಊರಲ್ಲಿ ಇದ್ದು ಒಂದೇ ಕಡೆ ರಾಶಿ ಹಾಕಿದ್ದು ನೋಡಿ ಅಚ್ಚರಿ ಆಗಿದೆ. ಚಿನ್ನಯ್ಯ ಹೇಳಿದ್ದು ನೂರಕ್ಕೆ ನೂರು ಸತ್ಯ, ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿಕೊಂಡಿದ್ದಾರೆ.