ಬೆಂಗಳೂರು: ಧರ್ಮಸ್ಥಳ ಪ್ರಕರಣಗಳಲ್ಲಿ (Dharmasthala Case) ಏನೇ ದೂರು, ಆರೋಪ ಇದ್ದರೂ ಎಸ್ಐಟಿ (SIT) ಅಧಿಕಾರಿಗಳೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದರು.
ಧರ್ಮಸ್ಥಳದ 3 ಲಾರ್ಡ್ಜ್ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ದೂರು ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದರು. ದೂರು ತೆಗೆದುಕೊಳ್ಳಬೇಕೇ, ಬೇಡವೇ ಅಂತ ಎಸ್ಐಟಿಯವರು ಪರಿಶೀಲಿಸುತ್ತಾರೆ. ಪ್ರಕರಣ ಬೇರೆ ಬೇರೆ ದಿಕ್ಕಿಗೆ ಹೋಗುವಂತಹ ಪ್ರಯತ್ನ ನಡೆದರೆ, ಎಸ್ಐಟಿಯವರು ಬೇರೆ ತರಹ ತನಿಖೆ ಮಾಡುತ್ತಾರೆ ಎಂದರು.
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಬಗ್ಗೆ ವಿಠಲಗೌಡ (Vittal Gowda) ಆರೋಪದ ಬಗ್ಗೆ ಮಾತಾಡಿದ ಅವರು, ಯಾರೋ ಕೊಟ್ಟ ಹೇಳಿಕೆ ಮೇಲೆ ನಾವು ತೀರ್ಮಾನ ಮಾಡುವುದಿಲ್ಲ. ಎಸ್ಐಟಿ ಮುಂದೆ ಏನು ದೂರು ಕೊಟ್ಟಿರುತ್ತಾರೆ. ಅದಕ್ಕೆ ಸಾಕ್ಷ್ಯ ಕೊಟ್ಟಿರುತ್ತಾರೆ. ಅದೆಲ್ಲವನ್ನು ನೋಡಿ ಎಸ್ಐಟಿಯವರು ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕೆಂದರೆ ಕೇಳುತ್ತಾರೆ. ಸದ್ಯಕ್ಕೆ ಯಾವುದೇ ಅನುಮತಿ ಕೇಳುವುದಕ್ಕೆ ಬಂದಿಲ್ಲ ಎಂದು ತಿಳಿಸಿದರು.

ಪ್ರತಿನಿತ್ಯ ನಾವು ಏನು ಮಾಡುತ್ತಿದ್ದೇವೆ ಎಂದು ಎಸ್ಐಟಿಯವರು, ಮಾಧ್ಯಮಕ್ಕಾಗಲಿ ಅಥವಾ ಸಾರ್ವಜನಿಕರಿಗಾಗಲಿ ಹೇಳುವುದಿಲ್ಲ. ಅನೇಕ ವಿಚಾರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಿಲ್ಲ. ಇದರಿಂದ ಎಸ್ಐಟಿ ವೇಗ ಕಳೆದುಕೊಂಡು ಬಿಟ್ಟಿದೆ, ತನಿಖೆ ನಡೆಯುತ್ತಿಲ್ಲ ಅಂದುಕೊಳ್ಳಬಾರದು. ಅನೇಕ ವಿಚಾರಗಳಲ್ಲಿ ಸಂಪೂರ್ಣ ಮಾಹಿತಿ ಬರುವವರೆಗೂ ಎಸ್ಐಟಿಯವರು ನಮಗೂ ಹೇಳುವುದಿಲ್ಲ ಎಂದರು.
ಧರ್ಮಸ್ಥಳ ಆರೋಪ ಪ್ರಕರಣದಲ್ಲಿ ಚಿನ್ನಯ್ಯನ ಬೆಂಬಲವಾಗಿ ನಿಂತವರನ್ನು ಬಂಧಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರನ್ನು ಬಂಧಿಸಬೇಕು, ಯಾವಾಗ ಬಂಧಿಸಬೇಕು ಎಂಬುದನ್ನು ನಾವು ಎಸ್ಐಟಿಯವರಿಗೆ ಹೇಳಲಾಗುತ್ತದೆಯೇ? ಮಾಧ್ಯಮದವರು ಹೇಳಿದ್ದನ್ನು ಗಣನೆಗೆ ತೆಗೆದುಕೊಂಡು ಕೂಡಲೇ ಬಂಧಿಸಲು ಆಗುವುದಿಲ್ಲ. ಅವರಿಗೆ ಏನು ಮಾಹಿತಿ ಇದೆಯೋ ಅದಕ್ಕೆ ಅಗತ್ಯವಾದ ಪುರಾವೆ, ಸಾಕ್ಷ್ಯ ಸಿಗಬೇಕಲ್ಲ. ಅದನ್ನು ನೋಡಿಕೊಂಡು ಆನಂತರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.