Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

editor tv by editor tv
September 20, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಕ್ಯಾಪ್ಟನ್ ಸೂರ್ಯಕುಮಾರ್ ಅವರು ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಓಪನರ್​ ಆಗಿ ಕ್ರೀಸ್​ಗೆ ಆಗಮಿಸಿದ್ದ ಅಭಿಷೇಕ್ ಶರ್ಮಾ ಹಾಗೂ ಶುಭ್​ಮನ್​ ಗಿಲ್​ ಉತ್ತಮ ಆರಂಭ ಪಡೆಯಲಿಲ್ಲ. ಗಿಲ್​ 5 ರನ್​ಗೆ ಕ್ಲೀನ್​ ಬೋಲ್ಡ್​ ಆದರು.

20 Sep 2025 07:11

IND_OMAN

ಒಮಾನ್ ವಿರುದ್ಧ ಸೂರ್ಯಕುಮಾರ್ ನೇತೃತ್ವದ ಭಾರತ ತಂಡ ಹರಸಾಹಸ ಪಟ್ಟು ಕೊನೆಗೆ 21 ರನ್​ಗಳಿಂದ ಗೆದ್ದು ಬೀಗಿದೆ. ಕೈಜಾರುತ್ತಿದ್ದ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 

ಅಬುಧಾಬಿಯ ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕ್ಯಾಪ್ಟನ್ ಸೂರ್ಯಕುಮಾರ್ ಅವರು ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಓಪನರ್​ ಆಗಿ ಕ್ರೀಸ್​ಗೆ ಆಗಮಿಸಿದ್ದ ಅಭಿಷೇಕ್ ಶರ್ಮಾ ಹಾಗೂ ಶುಭ್​ಮನ್​ ಗಿಲ್​ ಉತ್ತಮ ಆರಂಭ ಪಡೆಯಲಿಲ್ಲ. ಗಿಲ್​ 5 ರನ್​ಗೆ ಕ್ಲೀನ್​ ಬೋಲ್ಡ್​ ಆಗಿ ಮತ್ತೆ ಬ್ಯಾಟಿಂಗ್​ನಲ್ಲಿ ವೈಫಲ್ಯ ಅನುಭವಿಸಿದರು. 

ABHISHEK_SHARMA_BAT

ಗಿಲ್​ ಬಳಿಕ ಕ್ರೀಸ್​ಗೆ ಸಂಜು ಸ್ಯಾಮ್ಸನ್​ ಆಗಮಿಸಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಇನ್ನೊಂದೆಡೆ ಅಬ್ಬರದ ಬ್ಯಾಟಿಂಗ್ ಮಾಡುತ್ತಿದ್ದ ಅಭಿಷೇಕ್ ಶರ್ಮಾ 5 ಬೌಂಡರಿ, 2 ಸಿಕ್ಸರ್​​ಗಳಿಂದ​ 38 ರನ್​ ಗಳಿಸಿ ಆಡುವಾಗ ಕ್ಯಾಚ್ ಕೊಟ್ಟರು. ಹಾರ್ದಿಕ್ ಪಾಂಡ್ಯ ಕೇವಲ 1 ರನ್​ಗೆ ರನೌಟ್​ ಆದರು. ಆಲ್​ರೌಂಡರ್ ಅಕ್ಷರ್ ಪಟೇಲ್ 26 ರನ್​ ಗಳಿಸಿದರೆ ಶಿವಂ ದುಬೆ 5 ರನ್​ಗೆ ಔಟ್ ಆದರು. ತಿಲಕ್​ ವರ್ಮಾ 2 ಸಿಕ್ಸರ್​ಗಳಿಂದ 29, ಆರ್ಷ್​ದೀಪ್ ಸಿಂಗ್ ರನೌಟ್ ಆದರು. 

ಆದರೆ ಕ್ರೀಸ್​ ಕಾಯ್ದುಕೊಂಡಿದ್ದ ಸಂಜು ಸ್ಯಾಮ್ಸನ್, ಒಮಾನ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿ ತಂಡದ ಮಾನ ಕಾಪಾಡಿದರು. 41 ಬಾಲ್​ಗಳಲ್ಲಿ 3 ಬೌಂಡರಿ, 3 ಭರ್ಜರಿ ಸಿಕ್ಸರ್​ಗಳಿಂದ ಅರ್ಧಶತಕ ಸಿಡಿಸಿದರು. ಇದೇ ವೇಳೆ 56 ರನ್​ ಗಳಿಸಿ ಆಡುವಾಗ ಸಂಜು ಔಟ್ ಆದರು. ಹೀಗಾಗಿ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ​ 189 ರನ್​ಗಳ ಗುರಿಯನ್ನು ಒಮಾನ್​ಗೆ ನೀಡಿತ್ತು. 

SANJU_SAMSON (3)

ಈ ಟಾರ್ಗೆಟ್ ಬೆನ್ನು ಬಿದ್ದ ಒಮಾನ್ ಉತ್ತಮ ಪೈಪೋಟಿಯನ್ನೇ ಕೊಟ್ಟಿತು. ಒಂದು ರೀತಿಯಲ್ಲಿ ಸೂರ್ಯಕುಮಾರ್ ಪಡೆಗೆ ನೀರುಕುಡಿಸುವ ಮಟ್ಟಕ್ಕೆ ಕೊನೆವರೆಗೆ ಪಂದ್ಯ ತಂದು ಸೋಲುಂಡಿತು. ಭರ್ಜರಿ ಬ್ಯಾಟಿಂಗ್ ಮಾಡಿದ ಒಮಾನ್ ಪರ ಓಪನರ್ಸ್​ ನಾಯಕ ಜತೀಂದರ್ ಸಿಂಗ್ 32 ಬಾರಿಸಿ ಔಟ್ ಆದರು. ಆದರೆ ಇನ್ನೊಬ್ಬ ಆರಂಭಿಕ ಬ್ಯಾಟ್ಸ್​ಮನ್​ ಅಮೀರ್ ಕಲೀಮ್​ 2 ಸಿಕ್ಸ್​, 7 ಅಮೋಘವಾದ ಬೌಂಡರಿಗಳಿಂದ 64 ರನ್​ ಚಚ್ಚಿದರು. 

ಇನ್ನು 3ನೇ ಬ್ಯಾಟರ್​ ಆಗಿ ಕ್ರೀಸ್​ಗೆ ಬಂದಿದ್ದ ಹಮ್ಮದ್ ಮಿರ್ಜಾ ಕೇವಲ 33 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸ್​ಗಳಿಂದ ಅರ್ಧಶತಕ ಸಿಡಿಸಿದರು. ವಿನಾಯಕ ಶುಕ್ಲಾ 1 ರನ್​, ಜಿಕ್ರಿಯಾ ಇಸ್ಲಾಂ ಹಾಗೂ ಜಿತೇನ್ ರಾಮನಂದಿ ಕ್ರೀಸ್​​ನಲ್ಲಿರುವಾಗ ಓವರ್​ ಮುಗಿದಿದ್ದರಿಂದ ಒಮಾನ್ ಗುರಿ ತಲುಪಲು ಆಗಲಿಲ್ಲ. ಹೀಗಾಗಿ ಟೀಮ್ ಇಂಡಿಯಾ 21 ರನ್​ಗಳಿಂದ ಪಂದ್ಯವನ್ನು ವಶಪಡಿಸಿಕೊಂಡಿತು. ಕೊನೆಗೆ ಮಾತನಾಡುವಾಗ ಕ್ಯಾಪ್ಟನ್​ ಸೂರ್ಯಕುಮಾರ್ ಅವರು ಒಮಾನ್​ ತಂಡದ ಬ್ಯಾಟಿಂಗ್​ಗೆ ಶ್ಲಾಘನೆ ವ್ಯಕ್ತಪಡಿಸಿದರು. 

Previous Post

ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.