Published : Oct 01 2025, 01:08 PM IST

PM Modi Releases ₹100 Coin with Bharat Mata for RSS Centenary ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ 100 ರೂಪಾಯಿ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.
ನವದೆಹಲಿ (ಅ.1): ವಿಜಯದಶಮಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ನವದೆಹಲಿಯಲ್ಲಿ ವಿಶೇಷ 100 ರೂಪಾಯಿ ನಾಣ್ಯ ಹಾಗೂ ಅಂಚೆ ಚೀಟಿಯನ್ನು ರಿಲೀಸ್ ಮಾಡಿದರು. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಭಾರತದ ನಾಣ್ಯವೊಂದರಲ್ಲಿ ಭಾರತ ಮಾತೆಯ ಚಿತ್ರ ಮುದ್ರಿತವಾಗಿದೆ ಎಂದು ಹೇಳಿದರು. ನಾಣ್ಯದ ಮುಂಬದಿಯಲ್ಲಿ 100 ರೂಪಾಯಿಯನ್ನು ಗುರುತಿಸುವ ಅಂಕಿ ಇದ್ದರೆ, ಹಿಂಬದಿಯಲ್ಲಿ ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.
ಇದೇ ಮೊದಲ ಬಾರಿಗೆ ನಾಣ್ಯದ ಮೇಲೆ ಭಾರತ ಮಾತೆಯ ಚಿತ್ರ
ನವದೆಹಲಿಯ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ ಎಂದು ಹೇಳಿದರು.

