
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru Assassination) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ಈವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ . ಈ ಬಗ್ಗೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar), ಪ್ರಕರಣದಲ್ಲಿ ಭಾಗಿಯಾದವರನ್ನ ಯಾರನ್ನ ಬಿಡುವುದಿಲ್ಲ ಎಂದಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 7ನೇ ಪಡೆ ಕಮಾಂಡೆಂಟ್ ಬಿಎಂ ಪ್ರಸಾದ್ ಅವರು ಮೀಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಭದ್ರತೆ ಪರಿಶೀಲಿಸಿದ ಕಮಾಂಡೆಂಟ್ ಬಿಎಂ ಪ್ರಸಾದ್, ಕಟ್ಟೆಚ್ಚರದಲ್ಲಿ ಇರುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
