
ಮಂಗಳೂರು :ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್‌ರ ನಿವಾಸದಲ್ಲಿ ತುರ್ತು ಸಭೆ ನಡೆದು ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಮತ್ತು ಮೃತಪಟ್ಟ ಮೂವರು ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವನು ಅನುಗ್ರಹಿಸಲಿ ಎಂದು ಮಸೂದ್ ಸಭೆಯಲ್ಲಿ ಸಾಂತ್ವನ ಮಾತುಗಳನ್ನು ಆಡಿದ್ದಾರೆ.
ಶಾಂತಿ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, “ಸ್ವತಹ ಮುಖ್ಯಮಂತ್ರಿಗಳೇ ಮುಂದೆ ನಿಂತು ಒಂದು ಸಮುದಾಯವನ್ನು ‘ಎರಡನೇ ದರ್ಜೆಯ ನಾಗರಿಕರು’ ಎಂಬಂತೆ ಬಹಿರಂಗವಾಗಿ ನಡೆಸಿಕೊಂಡು, ನಂತರ ಜಿಲ್ಲಾಧಿಕಾರಿಗಳು ಆ ‘ಸಮುದಾಯ’ವನ್ನು ಶಾಂತಿ ಸಭೆಗೆ ಆಹ್ವಾನಿಸುವುದನ್ನು ತಾರತಮ್ಯಕ್ಕೊಳಗಾದ ಸಮುದಾಯ ಏನೂಂತ ಅರ್ಥೈಸಿಕೊಳ್ಳಬೇಕು” ಎಂದು ಪ್ರಶ್ನಿಸಿದ್ದಾರೆ.
