

ಕಾಲುಸಂಕ ದಾಟುವಾಗ ಬಾಲಕಿ ನೀರುಪಾಲು; ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ
ಕುಂದಾಪುರ: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 7ವರ್ಷದ ಬಾಲಕಿಯೋರ್ವಳು ನೀರುಪಾಲಾದ ಘಟನೆಗೆ ಸಂಬಂಧಿಸಿ ಬಾಲಕಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆ ಮುಗಿಸಿ ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿರುವ ಕಾಲು ಸಂಕ ದಾಟುವಾಗ ಆಯಾತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ಬಳಿಕ ವಿಷಯ ತಿಳಿದ ಸ್ಥಳೀಯರು ಹುಡುಕಾಟ ಆರಂಭಿಸಿದ್ದಾರೆ. ಬೊಳಂಬಳ್ಳಿ ನದಿಗೆ ಸೇರುವ ಈ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

