


ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವು ತಮ್ಮ ಮಾಲೀಕತ್ವದಲ್ಲಿ ಇಲ್ಲ ಎಂದು ಬಿಬಿಎಂಪಿ ಹೇಳಿದ ನಂತರವೂ ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ. ಇದೀಗ ಈದ್ಗಾ ಮೈದಾನವನ್ನು ಕಂದಾಯ ಭೂಮಿ ಎಂದು ಸರ್ಕಾರ ಹೇಳಿದೆ. ಆದರೆ ಇದರ ವಿರದ್ಧ ರಾಜ್ಯ ವಕ್ಫ್ ಮಂಡಳಿ ಸುಪ್ರೀಂಕೋರ್ಟ್ಗೆ ತೆರಳುವುದಾಗಿ ಹೇಳಿದೆ.
ಇಷ್ಟೆ ಅಲ್ಲದೆ, ಬಿಜೆಪಿ ಪರ ಒಲವಿರುವ ಬಲಪಂಥೀಯ ಸಂಘಟನೆಗಳು ಅಲ್ಲಿ ಗಣೇಶ ಹಬ್ಬವನ್ನು ಮಾಡುವುದಾಗಿ ಹೇಳಿಕೆ ನೀಡಿ ಮತ್ತೆ ವಿವಾದವೆಬ್ಬಿಸಿದ್ದಾರೆ. ಈ ಹಿನ್ನಲೆಯಲ್ಲಿ “ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವುದಿಲ್ಲ” ಎಂದು ಚಾಮರಾಜ. ಪೇಟೆ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದರು.
ಈ ನಡುವೆ ರಾಜ್ಯ ವಕ್ಪ್ ಮಂಡಳಿಯು ಸರ್ಕಾರದ ಆದೇಶ ಮತ್ತು ಗಣೇಶೋತ್ಸವವ ಆಯೋಜಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್: ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ, “ಬಿಬಿಎಂಪಿ ಆಡಳಿತವೇ ಈ ಮೈದಾನ ಬಿಬಿಎಂಪಿಯ ಆಟದ ಮೈದಾನ ಅಲ್ಲ ಎಂದು ಒಪ್ಪಿಕೊಂಡಿರುವುದು ನಮ್ಮ ಕಾನೂನು ತಂಡದ ದೊಡ್ಡ ಗೆಲುವು. ಇದೀಗ ಅದು ಕಂದಾಯ ಇಲಾಖೆಯ ಮೈದಾನ ಎಂದು ಹೇಳಿದೆ. ಆದರೆ ಇದು ಸುಪ್ರಿಂಕೋರ್ಟ್ನ ಆದೇಶದ ಉಲ್ಲಂಘನೆಯಾಗಿದ್ದು, ಕಂದಾಯ ಇಲಾಖೆ ಇನ್ನೊಂದು ಮುಜುಗರಕ್ಕೆ ಒಳಗಾಗಿದೆ.
ಹಿಂದೆ ವಿವಾದವೆದ್ದಿದ್ದಾಗ , ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಜೂನ್ 22ರ ಬುಧವಾರ ಹೇಳಿದ್ದರು. ಈ ಮೂಲಕ ವಿವಾದಕ್ಕೆ ತೆರೆ ಎಳೆದಿತ್ತು.
ಅಂದು ಮಾಧ್ಯಮಗಳಿಗೆ ಸ್ಪಷ್ಟನೆ ಬಿಬಿಎಂಪಿ ಆಯುಕ್ತ ತುಷಾರ್, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಜೂನ್ನಲ್ಲಿ ತಿಳಿಸಿದ್ದರು.