– ಜಾಹೀರಾತಿನಲ್ಲಿ ನೆಹರೂ ಹೆಸರು ಕೈಬಿಟ್ಟ ಸರ್ಕಾರ


ಬೆಂಗಳೂರು: ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ? ಬೊಮ್ಮಾಯಿ ಅವರೇ ಪಂಡಿತ್ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.

ಆರ್‌ಎಸ್‌ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರು ಅವರ ಬಗ್ಗೆ ಆರ್‌ಎಸ್‌ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ ಬೊಮ್ಮಾಯಿ ಅವರೇ, ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ ಬೊಮ್ಮಾಯಿ ಅವರೇ?

