

ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಮೋದಿ ಕಾರ್ಯಕ್ರಮ ಇರುವುದರಿಂದ ವಾಹನದಟ್ಟಣೆ ಸಾಧ್ಯತೆ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 1 ಮತ್ತು 2 ರಂದು ಕೇರಳ ಮತ್ತು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೆ.2ರಂದು ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಹಲವೆಡೆ ಗಣೇಶೋತ್ಸವ ಶೋಭಾಯಾತ್ರೆ ನಡೆಯಲಿದ್ದು ಇದರಿಂದ ಜನಸಂಚಾರ ಮತ್ತು ವಾಹನದಟ್ಟಣೆ ಹಿನ್ನೆಲೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.