

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಕಾಡಾನೆ (Elephant) ದಾಳಿಗೆ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಅರ್ಜುನ್ (45) ಮೃತ ದುರ್ದೈವಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ತರು ಕಾಡಾನೆಗಳನ್ನು ಹಿಡಿಯುವಂತೆ ಆಗ್ರಹಿಸಿ ಅರಣ್ಯ ಇಲಾಖೆ (Forest Department) ಎದುರು ಕಾರ್ಮಿಕನ ಮೃತದೇಹವಿಟ್ಟು ಪ್ರತಿಭಟನೆ ಮಾಡಿದ್ದಾರೆ.
ಈ ವೇಳೆ ಪ್ರತಿಭಟನಾಕಾರರು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿ, ಪೊಲೀಸ್ ಜೀಪ್ ತಳ್ಳಾಡಿದ್ದಾರೆ. ಆಗ ಮೂಡಿಗೆರೆ ಟೌನ್ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ಮನಸೋಇಚ್ಛೆ ಥಳಿಸಿದ್ದಾರೆ. ಪೊಲೀಸರಿಂದ ಲಾಠಿ ಚಾರ್ಜ್ ವಿರೋಧಿಸಿ ಜನರು ಮತ್ತೆ ಪ್ರತಿಭಟನೆ ಮಾಡಿದ್ದಾರೆ.
ಕೊನೆಗೆ ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದು ಅರಣ್ಯ ಇಲಾಖೆ ಕಾಡಾನೆ ಸೆರೆ ಹಿಡಿಯುವಂತೆ ಆದೇಶ ನೀಡಿದೆ.