
ಶಿವಮೊಗ್ಗ: ಭಯೋತ್ಪದನೆ ಆರೋಪದಲ್ಲಿ ಬಂಧನವಾಗಿದ್ದ ಮಾಜ್ ನ ತಂದೆ ಮನೀರ್ ಅಹಮದ್(57) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮನೀರ್ ಅಹಮದ್, ಚಿಕಿತ್ಸೆ ಫಲಿಸದೇ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಮೂಲದವರಾದ ಮುನೀರ್ ಅಹಮದ್ ತಮ್ಮ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿಯೇ ನೆಲೆಸಿದ್ದರು. ಆದರೆ ತಮ್ಮ ಮಗ ಮಾಜ್ ಭಯೋತ್ಪದನೆ ಆರೋಪದಲ್ಲಿ ಬಂಧನವಾಗಿದ್ದ ವಿಷಯ ಕೇಳಿ ಮುನೀರ್ ಅಹಮದ್ ನೊಂದಿದ್ದರು. ಇದೇ ಕಾರಣದಿಂದಾಗಿ ಹೃದಯಾಘಾತ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಮುನೀರ್ ಅಹಮದ್ ತೀರ್ಥಹಳ್ಳಿಯ ಪ್ರತಿಷ್ಟಿತ ಕುಟುಂಬದವರಾಗಿದ್ದು, ಮುನೀರ್ ಅಹಮದ್ ತಂದೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಸದಸ್ಯರಾಗಿದ್ದರು. ತೀರ್ಥಹಳ್ಳಿಯಲ್ಲಿ ಹೋಲ್ ಸೇಲ್ ಮೀನು ವ್ಯಾಪಾರಿಯಾಗಿದ್ದ ಮಾಜ್ ಮಂಗಳೂರಿನಲ್ಲಿಯೂ ತಮ್ಮ ಉದ್ಯಮ ಮುಂದುವರಿಸಿದ್ದರು. ನಾಳೆ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಮಾಜ್ನನ್ನು ತಂದೆಯ ಅಂತಿಮ ದರ್ಶನಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ.
