

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ ಐಕ್ಯತಾ ಯಾತ್ರೆ’ಯಲ್ಲಿ #PayCM ಬಾವುಟ ಮತ್ತು ಟಿ ಶರ್ಟ್ ಧರಿಸಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಪೊಲೀಸರು ಹಲ್ಲೆ ನಡೆಸಿರುವುದನ್ನು ವಿಪಕ್ಷ ನಾಯಕ ಶನಿವಾರ ಖಂಡಿಸಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವಿಟರ್ನಲ್ಲಿ ಆಕ್ರೊಶ ವ್ಯಕ್ತಪಡಿಸಿದ್ದು, “#PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾನಂತೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ. ಈ ಪುಂಡ ಪೋಲಿಸನನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ರಾಜ್ಯ ಮುಖ್ಯಮಂತ್ರಿಯವರನ್ನು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.
ಯಥಾ ಮುಖ್ಯಮಂತ್ರಿ, ತಥಾ ಪೊಲೀಸ್. ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದರು. ಪೊಲೀಸರು ಅದನ್ನು ಅನುಷ್ಠಾನಗೊಳಿಸಲು ಹೊರಟಂತಿದೆ. 40% ಕಮಿಷನ್ಭ್ರ ಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್ ರಾಜ್ಯದ ಬಿಜೆಪಿ ಪಕ್ಷಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೆ ಬಿಜೆಪಿ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ” ಎಂದು ಅವರು ಕಿಡಿ ಕಾರಿದ್ದಾರೆ.