ಬೆಂಗಳೂರು ( BANGALROE ) ನಗರದ ವಿವಿಧೆಡೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಚುರುಕಾಗಿ ನಡೆಯುತ್ತಿದೆ. ತೆರವು ಕಾರ್ಯಾಚರಣೆ ವಿರೋಧಿಸಿ ಕೆ.ಆರ್.ಪುರಂನ ಗಾಯತ್ರಿ ಲೇಔಟ್ ( GAYATHRI LAYOUT ) ನಲ್ಲಿ ದಂಪತಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಂಡು ಆತ್ಮಾಹುತಿ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ.

ಈ ದಂಪತಿ ನಿರ್ಮಿಸಿರುವ ಮೂರು ಅಂತಸ್ತಿನ ಕಟ್ಟಡದಿಂದ 2 ಮೀಟರ್ ನಷ್ಟು ರಾಜಕಾಲುವೆ ಒತ್ತುವರಿಯಾಗಿದೆ ಎಂದು ಗುರುತಿಸಲಾಗಿದೆ. ಒತ್ತುವರಿ ಆಗಿದೆ ಎಂದು ಗುರುತಿಸಿರುವ ಸ್ಥಳದಲ್ಲಿಯೇ ಕಟ್ಟಡದ ಕಂಬವೂ ಇರುವ ಕಾರಣ, ಒತ್ತುವರಿ ತೆರವು ವೇಳೆ ಇಡೀ ಕಟ್ಟಡ ಉರುಳುವ ಭೀತಿ ಎದುರಾಗಿದೆ. 15 ವರ್ಷಗಳ ಹಿಂದೆ ನಾವು 40 ಲಕ್ಷ ಸಾಲ ಮಾಡಿ ಮನೆ ಕಟ್ಟಿಕೊಂಡಿದ್ದೇವೆ ಎಂದು ಹೇಳಿರುವ ಸೋನಾ, ಸುನಿಲ್ ಸಿಂಗ್ ದಂಪತಿ ಕಣ್ಣೀರು ಹಾಕುತ್ತಿದ್ದಾರೆ. ಲಾಕ್ ಡೌನ್ ವೇಳೆ ಕೆಲಸ ಕಳೆದುಕೊಂಡು ಕಂಗಾಲಾಗಿದ್ದೆವು. ಈಗ ಪರಿಸ್ಥಿತಿ ಒಂದು ಹಂತಕ್ಕೆ ಬರುತ್ತಿದೆ. ಮನೆ ಕಳೆದುಕೊಂಡರೆ ಬದುಕುವುದು ಹೇಗೆ..?
ಮನೆ ಕೆಡವಲು ಬಿಡುವುದಿಲ್ಲ ಎಂದು ಪೆಟ್ರೋಲ್ ಕ್ಯಾನ್ ಹಿಡಿದು ಆತ್ಮಹತ್ಯೆಗೆ ದಂಪತಿ ಯತ್ನಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ದಂಪತಿಯನ್ನು ಸ್ಥಳದಿಂದ ತೆರವು ಮಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಪೊಲೀಸರ ಎದುರೇ ದಂಪತಿ ಬೆಂಕಿ ಕಡ್ಡಿ ಗೀರಿಕೊಳ್ಳಲು ಯತ್ನಿಸಿದಾಗ ಸ್ಥಳೀಯರು ಕೈಹಿಡಿದು ತಡೆದಿದ್ದಾರೆ. ‘ಈ ಮನೆ ಸದ್ಯಕ್ಕೆ ಬಿಟ್ಟು, ಬೇರೆ ಮನೆ ಡೆಮಾಲಿಷನ್’ ಮಾಡಿ ಎಂದು ಪೊಲೀಸರು ಬಿಬಿಎಂಪಿಗೆ ಸೂಚಿಸಿದಾಗ ಅದಕ್ಕೂ ದಂಪತಿ ವಿರೋಧ ವ್ಯಕ್ತಪಡಿಸಿದ್ರು. ಯಾರ ಮನೆಯನ್ನೂ ಕೆಡವುವಂತಿಲ್ಲ. ಪೊಲೀಸರು ಮತ್ತು BBMP ಸಿಬ್ಬಂದಿ ಇಲ್ಲಿಂದ ವಾಪಸ್ ಹೋಗಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಥ( BASAVARAJ BOMMAI ) ಳಕ್ಕೆ ಭೇಟಿ ನೀಡಿ ನಮ್ಮ ಅಹವಾಲು ಆಲಿಸಬೇಕು. ನಾವು ಒಂದೊಮ್ಮೆ ಬೆಂಕಿ ಹಚ್ಚಿಕೊಂಡರೆ ಅದಕ್ಕೆ ಪೊಲೀಸರೇ ಕಾರಣ ಎಂದು ದಂಪತಿ ಆಕ್ರೋಶ ವ್ಯಕ್ತಪಡಿಸಿದ್ರು.