Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

Surathkal Toll Gate Issue: ಟೋಲ್ ಗೇಟ್ ಕಿತ್ತೆಸೆಯಲು ನಾಳೆ ನೇರ ಕಾರ್ಯಾಚರಣೆ!

editor tv by editor tv
October 17, 2022
in ರಾಜ್ಯ, ಸುದ್ದಿ
0
ಸುರತ್ಕಲ್ : ಟೋಲ್ ಗೇಟ್ ಹೋರಾಟಗಾರರ ಮೇಲೆ ಪೊಲೀಸ್ ಬಲ ಪ್ರಯೋಗ ? 
1.9k
VIEWS
Share on FacebookShare on TwitterShare on Whatsapp

ಮಂಗಳೂರು (ಅ.17):  ಕಳೆದ ಹಲವು ವರ್ಷಗಳಿಂದ ಭಾರೀ ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿವಾದ ನಾಳೆ ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದೆ. ಟೋಲ್ ಗೇಟ್ ಕಿತ್ತೆಸೆಯಲು ನಾಳೆ ‘ನೇರ ಕಾರ್ಯಾಚರಣೆ’ಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿದೆ. ಟೋಲ್ ವಿರೋಧಿ ಹೋರಾಟ ಸಮಿತಿಯಿಂದ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆಗೆ ಕರೆ ಕೊಡಲಾಗಿದ್ದು, ಕಾಂಗ್ರೆಸ್, ಡಿವೈಎಫ್ಐ, ಎಸ್ಸಿ ಡಿ ಪಿ ಐ, ಸಿ ಪಿಐಎಂ ಸೇರಿ ಹತ್ತಾರು ಸಮಾನ ಮನಸ್ಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ‌ಭಾರೀ ಪ್ರಚಾರ ನಡೆಸಿರುವ ಟೋಲ್ ವಿರೋಧಿ ಸಮಿತಿ, ನಾಳೆ ಬೆ.10 ಗಂಟೆಗೆ ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆಗೆ ಸಿದ್ದತೆ ನಡೆಸಿದೆ. ಮುತ್ತಿಗೆ ವೇಳೆ ಪೊಲೀಸ್ ಇಲಾಖೆ ಮತ್ತು ಹೋರಾಟಗಾರರ ಜೊತೆ ಸಂಘರ್ಷ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಟೋಲ್ ಗೇಟ್ ವಿರೋಧಿ ಹೋರಾಟಗಾರರಿಗೆ ಮಂಗಳೂರು ಪೊಲೀಸರಿಂದ ನೋಟೀಸ್ ಜಾರಿಯಾಗಿದ್ದು, ಸಿಆರ್ ಪಿಸಿ 107ರ ಅಡಿಯಲ್ಲಿ ಹೋರಾಟಗಾರಿಗೆ ನೋಟೀಸ್ ‌ನೀಡಲಾಗಿದೆ.‌ ಒಟ್ಟು 16 ಹೋರಾಟಗಾರರಿಗೆ ನೋಟೀಸ್ ಜಾರಿ ಮಾಡಿರುವ ಪೊಲೀಸ್ ಇಲಾಖೆ, ರಾತ್ರೋರಾತ್ರಿ ಹೋರಾಟಗಾರರ ಮನೆಗಳಿಗೆ ತೆರಳಿ ಸುರತ್ಕಲ್, ಪಣಂಬೂರು ಪೊಲೀಸರಿಂದ ನೋಟೀಸ್ ಜಾರಿ ಮಾಡಲಾಗಿದೆ.

ಸಂಚಾಲಕ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಸೇರಿ 16 ಜನರಿಗೆ ‌ನೋಟೀಸ್ ನೀಡಿದ್ದು, ಅಹಿತಕರ ‌ಘಟನೆ ನಡೆದರೆ ಹೋರಾಟಗಾರರೇ ಜವಾಬ್ದಾರಿ ಅಂತ ಮುಚ್ಚಳಿಕೆ ಬರೆಸಲು ನೋಟೀಸ್ ಕೊಡಲಾಗಿದೆ. 2015 ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೋಲ್ ಗೇಟ್ ಆರಂಭಗೊಂಡಿತ್ತು.‌ ಆದರೆ ಹೈವೆಯಲ್ಲಿ 60 ಕಿಲೋಮೀಟರ್ ಅಂತರದಲ್ಲಿ ಟೋಲ್ ಇರಬೇಕಾದದ್ದು ಹೆದ್ದಾರಿ ಪ್ರಾಧಿಕಾರದ ನಿಯಮ. ಆದರೆ ಸುರತ್ಕಲ್ ಟೋಲ್ ಆ ನಿಯಮವನ್ನು ಮೀರಿದೆ ಎಂಬ ಆರೋಪ ಇದೆ.

ಸುರತ್ಕಲ್ ಟೋಲ್ ನಿಂದ ಉಡುಪಿಯ ಹೆಜಮಾಡಿ ಟೋಲ್ ಪ್ಲಾಜಾ ದೂರ ಕೇವಲ 17 ಕಿ.ಮೀ. ಅಕ್ರಮವಾಗಿ ಹಲವು ವರ್ಷಗಳಿಂದ ಟೋಲ್ ಸಂಗ್ರಹ ಇದ್ದು, ಸುರತ್ಕಲ್ ಟೋಲ್ ‌ಮುಚ್ಚುವಂತೆ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು.‌ ಸಂಸದ ನಳಿನ್ ಕುಮಾರ್ ಈ ಬಗ್ಗೆ ಗಡ್ಕರಿ ಜೊತೆ ಮಾತನಾಡಿ‌ ಈ ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಮುಚ್ಚುವ ಭರವಸೆ ನೀಡಿದ್ದರು. ಆದರೆ ಮುಚ್ಚುವ ಬದಲು ಹೊಸ ಗುತ್ತಿಗೆದಾರನಿಗೆ ಟೋಲ್ ವಹಿಸಲು ಟೆಂಡರ್ ‌ಆಗಿದ್ದು, ಹೀಗಾಗಿ ನಿರ್ಣಾಯಕ ಹೋರಾಟಕ್ಕೆ ಸಂಘಟನೆಗಳು ಮುಂದಾಗಿವೆ.

ನಾಳಿನ ಹೋರಾಟ ನಿಲ್ಲಲ್ಲ:  ನಾಳೆ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಪೊಲೀಸರ ಮೂಲಕ ನಿರ್ದಯವಾಗಿ ಹತ್ತಿಕ್ಕುವ ಯತ್ನವನ್ನು ಬಿಜೆಪಿ ಸರಕಾರ ನಡೆಸುತ್ತಿದೆ. ಅದರ ಭಾಗವಾಗಿ ಹೋರಾಟ ಸಮಿತಿಯ 50 ಕ್ಕೂ ಹೆಚ್ಚು ಪ್ರಮುಖರ ಮೇಲೆ ಶಾಂತಿಭಂಗ ಕಾಯ್ದೆ ಅಡಿ ನೋಟೀಸು ಜಾರಿ ಮಾಡಲಾಗಿದೆ. ನೋಟೀಸು ನೀಡುವ ನೆಪದಲ್ಲಿ ಮಧ್ಯರಾತ್ರಿ ಮನೆಗಳಿಗೆ ಬಂದು ಮಾನಸಿಕವಾಗಿ ಹಿಂಸಿಸಲಾಗಿದೆ. ಆ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಹತ್ತಿಕ್ಕುವ, ಟೋಲ್ ಗೇಟ್ ಸುಲಿಗೆಯನ್ನು ಶಾಶ್ವತಗೊಳಿಸುವ ಹುನ್ನಾರ ನಡೆಸಲಾಗಿದೆ. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಬಿಜೆಪಿ ಸರಕಾರದ ಈ ಸರ್ವಾಧಿಕಾರಿ ಧೋರಣೆಯನ್ನು ಬಲವಾಗಿ ಖಂಡಿಸುತ್ತಿದ್ದು, ಪೊಲೀಸರು ಹೊರಡಿಸಿರುವ ನೋಟೀಸನ್ನು ತಿರಸ್ಕರಿಸಿ ಬಂಧನಕ್ಕೆ ಒಳಗಾಗಗಲು ಸಿದ್ದ. ನಾಳೆ ಹೋರಾಟವನ್ನು ಮತ್ತಷ್ಟು ಉತ್ಸಾಹದಿಂದ ಶಾಂತಿಯುತವಾಗಿ ನಡೆಸಲು ನಿರ್ಧರಿಸಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ,  ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

Previous Post

Dakshina Kannada; 15 ಸಾವಿರ ಕಿ.ಮೀ. ಸೈಕಲ್‌ ಯಾತ್ರೆಗೆ ಸಿದ್ಧರಾದ ಕನ್ಯಾನದ ಯುವಕ

Next Post

ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ

Next Post
ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ

ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.