
ಗುಜರಾತ್‌ನ ಮೊರ್ಬಿ ಪ್ರದೇಶದ ಮಚ್ಚು ನದಿಯಲ್ಲಿ ಇಂದು (ಭಾನುವಾರ) ಕೇಬಲ್ ಸೇತುವೆ ಕುಸಿದು ಹಲವಾರು ಜನರು ಗಾಯಗೊಂಡಿದ್ದಾರೆ. ಮೊರ್ಬಿಯಲ್ಲಿ ತೂಗುಸೇತುವೆ ಕುಸಿತದ ದುರಂತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಗೊಂಡವರಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆಗಳನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ ನಾನು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.
