

ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ(10ನೇ ತರಗತಿ) ಪರೀಕ್ಷೆಯ ಅಂತಿಮ ವೇಳಾಪಟ್ಟಿ (Karnataka SSLC Exam Final Time Table) ಪ್ರಕಟವಾಗಿದೆ. 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಇಂದು(ಡಿಸೆಂಬರ್ 05) ಪ್ರಕಟಿಸಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ.