

ಮಂಗಳೂರು: ಡಿ. 3 ರಂದು ಮಂಗಳೂರಿನ ಯುವ ವಕೀಲ (lawyer) ಕುಲದೀಪ್ ಶೆಟ್ಟಿ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂದು ಆರೋಪ ಮಾಡಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪಿಎಸ್ಐ ಸುತೇಶ್ನನ್ನು ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ (transferred) ಮಾಡಲಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಎಂಬ ಕಾರಣ ಕೊಟ್ಟು ವರ್ಗಾವಣೆ ಮಾಡಲಾಗಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ಧ ಪ್ರತಿಬಂದಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು ಇದನ್ನು ಖಂಡಿಸಿ ನೂರಾರು ವಕೀಲರಿಂದ ಕೋರ್ಟ್ ಮುಂಭಾಗ ಪ್ರತಿಭಟನೆ ಕೂಡ ಮಾಡಲಾಗಿದೆ.
ಯುವ ವಕೀಲ ಕುಲದೀಪ್ ಶೆಟ್ಟಿ ವಿರುದ್ಧ ಸಿವಿಲ್ ಕೇಸ್ನಲ್ಲಿ ಎಫ್.ಐ.ಆರ್ ದಾಖಲಿಸಿ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧನ ಮಾಡಲಾಗಿತ್ತು. ಅರೆಬೆತ್ತಲಾಗಿ ನ್ಯಾಯವಾದಿಯನ್ನ ಜೀಪಿನಲ್ಲಿ ಎಳೆದುಕೊಂಡು ಹೋಗಿ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿತ್ತು.
ಸದ್ಯ ಪುಂಜಾಲಕಟ್ಟೆ ಪಿಎಸ್ಸೈ ವಿರುದ್ದ ದ.ಕ ಜಿಲ್ಲಾ ವಕೀಲರ ಸಂಘ ಸೇರಿ ರಾಜ್ಯಾದ್ಯಂತ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದು, ಅಮಾನತಿಗೆ ಆಗ್ರಹಿಸಿ ವಕೀಲರಿಂದ ಪ್ರತಿಭಟನೆ ಮಾಡಲಾಗಿದೆ. ನ್ಯಾಯವಾದಿ ಜೊತೆ ಕೆಟ್ಟದಾಗಿ ನಡೆದುಕೊಂಡ ಪೊಲೀಸರ ವರ್ತನೆಗೆ ಕಿಡಿಕಾರಿದ್ದಾರೆ. ಜಾಗದ ವಿಚಾರದ ಜಗಳದಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಬೆಳ್ತಂಗಡಿ ಪಿ.ಎಸ್.ಐ ನಂದಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.