

ಬೆಂಗಳೂರು: ಹಿಂದೂ ಕಾರ್ಯಕರ್ತರ (Hindu Activists) ಮೇಲೆ ಕಾರ್ಕಳ ಕ್ಷೇತ್ರದಲ್ಲಿ (Karkala Constituency) ಸಚಿವ ಸುನಿಲ್ ಕುಮಾರ್ (Sunil Kumar) ನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರು ಕೆಂಡಾಮಂಡಲವಾಗಿದ್ದಾರೆ.
ಸಚಿವ ಸುನಿಲ್ ಕುಮಾರ್ ಅವರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಖಂಡಿಸಿ ಶ್ರೀರಾಮ ಸೇನೆಯ (Sri Rama Sena) ಬೆಂಗಳೂರು ವಿಭಾಗ ದೌರ್ಜನ್ಯ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ನಾಯಕರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಸುನಿಲ್ ಕುಮಾರ್ ವಿರುದ್ಧ ಆರೋಪ ಹೊರಿಸಿದ್ದಾರೆ.