

ಖಬರಸ್ಥಾನ ನೆಲಸಮಗೊಳಿಸಿದ ಕೃತ್ಯದಿಂದ ಮುಸ್ಲಿಂ ಸಮಾಜದವರಿಗೆ ಮಾನಸಿಕ ಹಿಂಸೆಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು – ಮಹಮ್ಮದ್ ಗೌಸ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು
ಬಳ್ಳಾರಿ: ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಮುಸ್ಲಿಂ ಸಮಾಜದ ಖಬರಸ್ತಾನದಲ್ಲಿನ (Kabrastan) ನೂರಕ್ಕೂ ಹೆಚ್ಚು ಸಮಾಧಿಗಳನ್ನು ಸಂಪೂರ್ಣ ನೆಲಸಮಗೊಳಿಸಿರುವ (Demolishion) ಘಟನೆ ನಡೆದಿದೆ. ಸುಮಾರು ವರ್ಷಗಳಿಂದ ಮುಸ್ಲಿಮರು ಈ ಖಬರಸ್ತಾನದಲ್ಲಿ ಮೃತರ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದು. ಅವರ ನೆನಪಲ್ಲಿ ಸಮಾಧಿ ನಿರ್ಮಿಸಿದ್ದಾರೆ. ಆದರೆ ಯಾರೋ ದುಷ್ಕರ್ಮಿಗಳು ಭಾನುವಾರ ತಡರಾತ್ರಿ ಜೆಸಿಬಿಯಿಂದ ಸಮಾಧಿಗಳನ್ನೆಲ್ಲ (Burial Ground) ನೆಲಸಮಗೊಳಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಖಬರಸ್ಥಾನ ನೆಲಸಮಗೊಳಿಸಿದ ಕೃತ್ಯದಿಂದ ಮುಸ್ಲಿಂ ಸಮಾಜದವರಿಗೆ ಮಾನಸಿಕ ಹಿಂಸೆಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯ ವಕ್ಫ್ ಬೋರ್ಡ್ ಅಡಿಯಲ್ಲಿ ಬರುವ ಮುಸ್ಲಿಂ ಖಬರಸ್ತಾನ (ಸುನ್ನಿ) ಆಡಿಷನಲ್ ಪ್ರಾಪರ್ಟಿ ಆಫ್ ಮಸೀದಿ-ಇ-ಫಿರ್ದೋಸ್ ನ ಅಧ್ಯಕ್ಷ ಮಹಮ್ಮದ್ ಗೌಸ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಸೋಮವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುಷ್ಕಮಿಗಳಿಗಾಗಿ ಬಲೆ ಬೀಸಿದ್ದಾರೆ.
ಈ ಕುರಿತು ಸಂಬಂಧಿಸಿದ ಇಲಾಖೆಯ ಗಮನಕ್ಕೆ ಈ ವಿಷಯ ತರಲಾಗಿದೆ. ಅವರು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಜರುಗಿಸುವರು ಎಂದು ಎಸ್ಪಿ ಶ್ರೀಹರಿಬಾಬು ತಿಳಿಸಿದ್ದಾರೆ.
ಹೊಸಪೇಟೆ ಪಟ್ಟಣದ ಮುಸ್ಲಿಂ ಸಮುದಾಯದ ಮುಖಂಡರು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.