

ತಿರುವನಂತಪುರಂ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ನಾಯಕರು ಹಾಗೂ ಕಾರ್ಯಕರ್ತರಿಗೆ ಸಂಬಂಧಿಸಿದ ಕೇರಳದ (Kerala) 56 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಳಿ ನಡೆಸಿದೆ
.ಕೇರಳದ ಹಲವಾರು ಜಿಲ್ಲೆಗಳಲ್ಲಿ ಎನ್ಐಎ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಆಲಪ್ಪುಳ ಹಾಗೂ ಮಲಪ್ಪುರಂನಲ್ಲಿ ಎನ್ಐಎ ರೇಡ್ ನಡೆಸಿದೆ. ಎರ್ನಾಕುಲಂನಲ್ಲಿ 8 ಕಡೆ, ಅಲಪ್ಪುಳ ಹಾಗೂ ಮಲಪ್ಪುರಂನಲ್ಲಿ 4 ಕಡೆ ಹಾಗೂ ತಿರುವನಂತಪುರಂನಲ್ಲಿ 3 ಕಡೆ ಏಜೆನ್ಸಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಕೆಲ ತಿಂಗಳ ಹಿಂದೆ ಕಟ್ಟುನಿಟ್ಟಾದ ಭಯೋತ್ಪಾದನೆ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ ಅಡಿಯಲ್ಲಿ, ಕೇಂದ್ರ ಸರ್ಕಾರ ಪಿಎಫ್ಐ ಅನ್ನು ನಿಷೇಧಿಸಿದೆ. ಭಯೋತ್ಪಾದಕ ಸಂಘಟನೆಗಳೊಂದಿಗೆ ಇದು ಸಂಪರ್ಕ ಹೊಂದಿರುವುದಾಗಿ ಆರೋಪ ಮಾಡಲಾಗಿತ್ತು.