
ಮಂಗಳೂರು: ಬಿಜೆಪಿ (BJP) ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA), ಸುದೀರ್ಘ ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಬೆಂಗಳೂರಿನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ನ್ನು ಎನ್‌ಐಎ ಸಲ್ಲಿಸಿದೆ. ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿದಾರರ ಹೇಳಿಕೆ ಇದೆ. ಒಟ್ಟು 20 ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈವರೆಗೆ 14 ಮಂದಿ ಬಂಧನವಾಗಿದ್ದು, 6 ಮಂದಿಯ ವಾಂಟೆಡ್ ಲಿಸ್ಟ್ ಇದೆ.
ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಅರೋಪಿಗಳ ಪತ್ತೆಗೆ ಈಗಾಗಲೇ ಬಹುಮಾನ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್‍ಐಎ ಘೋಷಿಸಿದೆ.
. ಪ್ರಕರಣ ಸಂಬಂಧ ಈವರೆಗೂ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.