
ಬೆಳಗಾವಿ: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲ್ಲ. ಸುಮ್ಮನೆ ಅವರು ಹವಾ ಮಾಡುತ್ತಿದ್ದಾರೆ. ಕಡಿಮೆ ಸೀಟ್ ಬಂದರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಹೇಳಿದರು.
ಗೋಕಾಕ್ (Gokak) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬರಲ್ಲ. ಸುಮ್ಮನೆ ಅವರು ಹವಾ ಮಾಡುತ್ತಿದ್ದಾರೆ. ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಹೇಗಾದರೂ ಮಾಡಿ ನಾವು ಬಿಜೆಪಿ ಸರ್ಕಾರ (BJP Government) ಮಾಡ್ತೀವಿ ಬಿಡುವುದಿಲ್ಲ. ಎಲ್ಲಾ ಶಕ್ತಿ ಹಚ್ಚಿ ಬಿಜೆಪಿ ಸರ್ಕಾರ ಮಾಡೋದು ಪಕ್ಕಾ. ಒಂದು ಸ್ವಲ್ಪ ಕಡಿಮೆ ಸೀಟ್ ಬಂದರೂ ಏನಾದರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ. ತಲೆಕೆಡಿಸಿಕೊಳ್ಳಬೇಡಿ ಮುಂದೆ 2023ಕ್ಕೆ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು.
ರಮೇಶ್ ಜಾರಕಿಹೊಳಿ ಬಿಜೆಪಿ ಬಿಡ್ತಾರೆ ಅಂತಾ ಮಾಧ್ಯಮಗಳಲ್ಲಿ ಸೃಷ್ಟಿ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡುವುದಿಲ್ಲ. ಬಿಜೆಪಿಯಲ್ಲೇ ಇರೋನು ನಾನು, ಇಲ್ಲಿ ಒಂದು ಇತಿಹಾಸ ಮಾಡಿಯೇ ಹೋಗುತ್ತೇನೆ ಎಂದು ಹೇಳಿದರು.
