
ಮಂಗಳೂರು: ಚಿನ್ನದ ಅಂಗಡಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ನಗರದ ಹಂಪನಕಟ್ಟೆಯ ಬಳಿ ನಡೆದಿದೆ.
ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಈ ಘಟನೆ ಇಂದು ಸಂಜೆ 4. 15ರ ಸುಮಾರಿಗೆ ನಡೆದಿದೆ. ಚೂರಿ ಇರಿತದಿಂದ ಮೃತಪಟ್ಟ ವ್ಯಕ್ತಿಯನ್ನು ಅತ್ತಾವರ ನಿವಾಸಿ ರಾಘವ ಆಚಾರಿ (50) ಎಂದು ಗುರುತಿಸಲಾಗಿದೆ.
ಈ ಹಿಂದೆ ರಾಘವ ಅವರು ಗೋಲ್ಡ್ ಪ್ಯಾಲೆಸ್ ಜ್ಯುವೆಲ್ಲರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಅವರು ಮಂಗಳೂರು ಜ್ಯುವೆಲ್ಲರಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ, ಪತ್ನಿಯನ್ನು ಅಗಲಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.